ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 200 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎನ್ಪಿಸಿಐಎಲ್ನ ಅಧಿಕೃತ ವೆಬ್ಸೈಟ್ಗೆ ಹೋಗಿ ಏಪ್ರಿಲ್
23,2019 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು
ಶೈಕ್ಷಣಿಕ ವಿದ್ಯಾರ್ಹತೆ:
ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ ಬಿ.ಟೆಕ್/ ಬಿ.ಎಸ್ಸಿ/ 5 ವರ್ಷದ ಇಂಟಿಗ್ರೇಟೆಡ್ ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಶೇ60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಏಪ್ರಿಲ್ 23,2019ರ ಅನ್ವಯ ಸಾಮಾನ್ಯ /ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಗರಿಷ್ಟ 26 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 29 ವರ್ಷ ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಟ 31 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.
ವೇತನದ ವಿವರ:
ಟ್ರೈನಿ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ಸ್ಟೈಫೆಂಡ್ ನೀಡಲಾಗುವುದು. ತರಬೇತಿ ಅವಧಿ ಮುಗಿದ ನಂತರ ಅಭ್ಯರ್ಥಿಗಳಿಗೆ 56,100/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಗೇಟ್ 2017 ,2018 ಮತ್ತು 2019 ರ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು ,ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇನ್ನುಳಿದ ವರ್ಗದ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಎನ್ಪಿಸಿಐಎಲ್ ನ ಅಧಿಕೃತ ವೆಬ್ಸೈಟ್ ಗೆ ಹೋಗಿ ಏಪ್ರಿಲ್ 9,2019 ರಿಂದ ಏಪ್ರಿಲ್ 23,2019 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು.
No comments:
Post a Comment