ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ 2017ರಲ್ಲಿ ಸರಕಾರ ಕೆಲವು ನಿಯಮಗಳನ್ನು ಜಾರಿಗೆ ತಂದಿತ್ತು. 'ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಂಬಂಧಪಟ್ಟ ಅನುದಾನಿತ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ರಾಜೀನಾಮೆ, ಮರಣ, ಬಡ್ತಿ ಹಾಗೂ ಇತರೆ ಕಾರಣಗಳಿಂದ ಖಾಲಿ ಉಳಿದಿರುವ ಒಟ್ಟು 3,633 ಮಂದಿ ಶಿಕ್ಷಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸರಕಾರ ಅನುಮತಿ ನೀಡಿದೆ. 2015ರ ಡಿಸೆಂಬರ್ 31ಕ್ಕೆ ಹಿಂದೆ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಸರಕಾರ ಹಲವು ಬಾರಿ ನಡೆಸಿದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಗೊಂಡಿತ್ತು. ಶಿಕ್ಷಣ ತಜ್ಞರು, ವಿಧಾನ ಪರಿಷತ್ ಸದಸ್ಯರು ಈ ಬಗ್ಗೆ ಮನವಿ ಮಾಡಿದ್ದರು. 2019ರ ಜ.29ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕೂ ಈ ವಿಷಯ ಪ್ರಸ್ತಾಪಗೊಂಡಿತ್ತು. ಈ ಸಭೆಯಲ್ಲಿಯೇ ಷರತ್ತನ್ನು ಕೈ ಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇತ್ತೀಚೆಗೆ ಸರಕಾರ ಈ ಸಂಬಂಧ ಆದೇಶ ಕೂಡ ಹೊರಡಿಸಿದೆ. ಹೀಗಾಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಉಳಿದಿರುವ ಒಟ್ಟು 3,633 ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ ದೊರೆತಿದೆ.
No comments:
Post a Comment