ಅಮೇಥಿ (ಉತ್ತರ ಪ್ರದೇಶ): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶ ರಾಜ್ಯದ ಅಮೇಥಿ ಲೋಕಸಭೆ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.
ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ವೇಳೆ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕ ಗಾಂಧಿ, ಹಾಗೂ ರಾಬರ್ಟ್ ವಾದ್ರ ಉಪಸ್ಥಿತರಿದ್ದರು.
ಇಲ್ಲಿನ ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಹಿರಿಯ ಮುಖಂಡರಾದ ಸಂಜಯ್ ಸಿಂಗ್, ಪ್ರಮೋದ್ ತಿವಾರಿ ಸಾಥ್ ನೀಡಿದರು.
ರೋಡ್ ಶೋ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.
ರಾಹುಲ್ ಗಾಂಧಿ ಅಮೇಥಿಯನ್ನು ಮೊದಲ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದಲೂ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ.
No comments:
Post a Comment